ತಮಿಳುನಾಡಿನಲ್ಲಿ 11ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – 2 ವಾರಗಳಲ್ಲಿ 4ನೇ ಸಾವು…

64
firstsuddi

ಚೆನ್ನೈ: ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಸರಣಿ ಆತ್ಮಹತ್ಯೆ ಮುಂದುವರಿದಿದೆ. ನಿನ್ನೆ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶಿವಕಾಶಿಯಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಯಾವುದೇ ಡೆತ್ ನೋಟ್ ಕೂಡ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಾಲಕಿ ದೀರ್ಘಕಾಲದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ 12 ನೇ ತರಗತಿಯ ಮೂವರು ಮತ್ತು ಈಗ 11 ನೇ ತರಗತಿಯ ಬಾಲಕಿ ಸಾವನ್ನಪ್ಪಿದ್ದಾರೆ. ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿಯ ವಿದ್ಯಾರ್ಥಿ ಶವವಾಗಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಶಿವಕಾಶಿಯಲ್ಲಿ ಈ ಘಟನೆ ನಡೆದಿದೆ.