ಚೆನ್ನೈ : ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ವಿವೇಕ್ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ವಿವೇಕ್ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡ ಹಿನ್ನಲೆ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಆರೋಗ್ಯ ಸ್ಥಿತಿ ಪರೀಕ್ಷಿಸಿದಾಗ ಹೃದಯಾಘಾತವಾಗಿರುವುದು ತಿಳಿದು ಬಂದಿದೆ. ನಂತರ ವಿವೇಕ್ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ವಿವೇಕ್ ಅವರು ತಮಿಳಿನ ಹಾಸ್ಯ ನಟರಾಗಿದ್ದು, 220 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವಿವೇಕ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ 2009 ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.










