ಬೆಂಗಳೂರು : ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಪುತ್ರಿಯ ನಿಶ್ಚಿತಾರ್ಥ ನಗರದ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಶ್ರೀರಾಮುಲು ಅವರ ಪುತ್ರಿ ರಕ್ಷಿತಾ ಕುಮಾರಿ ಅವರ ನಿಶ್ಚಿತಾರ್ಥ ಹೈದರಾಬಾದ್‍ನ ಉದ್ಯಮಿ ರವಿಕುಮಾರ್ ಅವರ ಪುತ್ರ ಲಲಿತ್ ಕುಮಾರ್ ಅವರೊಂದಿಗೆ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಇಬ್ಬರೂ ಲಂಡನ್‍ನಲ್ಲಿ ಎಂಬಿಎ ಓದಿದ್ದು, ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿದೆ, ಪೋಷಕರು ಇವರಿಬ್ಬರ ಪ್ರೀತಿಯನ್ನು ಒಪ್ಪಿಕೊಂಡು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನೆರವೇರಿಸಿದ್ದಾರೆ. ಶ್ರೀರಾಮುಲು ದಂಪತಿಗೆ ಒಟ್ಟು ನಾಲ್ವರು ಮಕ್ಕಳಿದ್ದು, ರಕ್ಷಿತಾ ಅವರು ಪ್ರಥಮ ಪುತ್ರಿಯಾಗಿದ್ದಾರೆ. ಅದ್ದೂರಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೇರಿದಂತೆ ಸಚಿವರು, ಶಾಸಕರು ಹಾಗೂ ಹಲವಾರು ಗಣ್ಯರು ಭಾಗವಹಿಸಿ ಜೋಡಿಗಳಿಗೆ ಶುಭಕೋರಿದ್ದಾರೆ.










