ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ…

75
firstsuddi

ಮಂಡ್ಯ : ಅಪ್ರಾಪ್ತ ಬಾಲಕಿ ಮೇಲೆ 60 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲು ವೃದ್ಧ ಯತ್ನಿಸಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ವೃದ್ಧನನ್ನು ತರಾಟೆಗೆ ತೆಗೆದುಕೊಂಡ ಪೋಷಕರು ಹಾಗೂ ಗ್ರಾಮಸ್ಥರು ಬಳಿಕ ಮದ್ದೂರು ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಕಾಮುಕ ವೃದ್ಧನ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.