ತಿರುಮಲ: ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಲಡ್ಡು ಕೌಂಟರ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಿರುಪತಿ ವೆಂಕಟೇಶ್ವರ ದೇವಸ್ಥಾನದ ಟಿಕೆಟ್ ಕೌಂಟರ್‍ನಲ್ಲಿ ಕಾಲ್ತುಳಿತ ಉಂಟಾಗಿ ಆರು ಜನ ಸಾವನ್ನಪ್ಪಿದ್ದರು. ಇದಾದ ನಂತರ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಇದೀಗ ಇಂದು ತಿರುಮಲ ಲಡ್ಡು ಕೌಂಟರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಯಭೀತರಾಗಿ ಭಕ್ತರು ಸ್ಥಳದಿಂದ ಓಡಿಹೋಗಿದ್ದಾರೆ. ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಉಂಟಾದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ದೇವಾಲಯದ 47ನೇ ಲಡ್ಡು ಕೌಂಟರ್‍ನಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ದೇವಾಲಯದ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದೆ. ಆಂಧ್ರಪ್ರದೇಶದ ತಿರುಮಲ ಲಡ್ಡು ಕೌಂಟರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದು ವೆಂಕಟೇಶ್ವರ ಸ್ವಾಮಿಯ ಪವಿತ್ರ ಪ್ರಸಾದವನ್ನು ಪಡೆಯುತ್ತಿದ್ದ ಭಕ್ತರಲ್ಲಿ ಭಯ ಹುಟ್ಟಿಸಿದೆ. ಬೆಂಕಿ ಹರಡುತ್ತಿದ್ದಂತೆ ಭಕ್ತರು ಭಯಭೀತರಾಗಿ ಸ್ಥಳದಿಂದ ಓಡಿಹೋದರು. ಅದಕ್ಕೆ ಸಿಬ್ಬಂದಿ ತಕ್ಷಣ ಪ್ರತಿಕ್ರಿಯಿಸಿದರು. ಇದು ಅಪಾಯವನ್ನುಂಟುಮಾಡುವ ಮೊದಲೇ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.