ತಿಹಾರ್ ಜೈಲಿನಲ್ಲಿ ಡಿಕೆಶಿ ಅವರನ್ನು ಭೇಟಿಯಾದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ…

525
firstsuddi

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭೇಟಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ ಕೇವಲ ಒಬ್ಬರನ್ನು ಮಾತ್ರ ಭೇಟಿಯಾಗುವ ಅವಕಾಶವನ್ನು ನೀಡಲಾಗಿತ್ತು. ಹೀಗಾಗಿ ಸೋನಿಯಾ ಗಾಂಧಿ ಅವರು ಇಂದು ಬೆಳಿಗ್ಗೆ 9 ಗಂಟೆಗೆ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಧೈರ್ಯ ತುಂಬಿದರು.