ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್‌ಗೆ ಮಸಾಜ್ – ವಿಡಿಯೋ ವೈರಲ್…

79
firstsuddi

ನವದೆಹಲಿ : ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಸತ್ಯೇಂದ್ರ ಜೈನ್ ಗೆ ವಿಐಪಿ ಸೌಕರ್ಯ ನೀಡಿದ್ದಕ್ಕಾಗಿ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೆಲವು ದಿನಗಳ ನಂತರ ಇದೀಗ ಬಿಜೆಪಿ ಹಳೆಯ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಮೂಲಗಳ ಪ್ರಕಾರ, ಈ ವೀಡಿಯೋ ಹಳೆಯದ್ದಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜೈಲು ಸಿಬ್ಬಂದಿ ವಿರುದ್ಧ ಜೈಲು ಅಧಿಕಾರಿಗಳು ಈಗಾಗಲೇ ಈ ಬಗ್ಗೆ ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ವಿಐಪಿ ಚಿಕಿತ್ಸೆ ನೀಡಲಾಗಿದ್ದು, ತಲೆಗೆ ಮಸಾಜ್, ಪಾದಕ್ಕೆ ಮಸಾಜ್ ಮತ್ತು ಬೆನ್ನಿಗೆ ಮಸಾಜ್ ಮಾಡುತ್ತಿರುವುದನ್ನು ಸಿಸಿಟಿವಿಯ ವಿಡಿಯೋದಲ್ಲಿ ನೋಡಬಹುದು. ಆಪ್ ದೆಹಲಿ ಸಚಿವರಿಗೆ ಜೈಲಿನಲ್ಲಿ ಐಷಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ಇಡಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿದೆ.