ತೀವ್ರ ಜ್ವರದಿಂದ ಬಳಲುತ್ತಿದ್ದ ರಾಷ್ಟ್ರೀಯ ಕ್ರೀಡಾಪಟು ನಿಧನ…

178
firstsuddi

ಶಿವಮೊಗ್ಗ: ತೀವ್ರ ಜ್ವರದಿಂದ ಬಳಲುತ್ತಿದ್ದ ರಾಷ್ಟ್ರೀಯ ಕ್ರೀಡಾಪಟು ನಿಧನರಾಗಿದ್ದಾರೆ.

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿಕೆರೆ ನಿವಾಸಿ ವಿನಯ್ ಸಾವನ್ನಪ್ಪಿದ ದುರ್ದೈವಿ. ತೀವ್ರ ಜ್ವರದಿಂದ ಬಳಲುತ್ತಿದ್ದ ವಿನಯ್ ಅವರು ತೀರ್ಥಹಳ್ಳಿಯ ಖಾಸಗಿ ಆಸ್ಪತ್ರಗೆ ದಾಖಲಾಗಿದ್ದರು. ಆದರೆ, ಜ್ವರ ಇನ್ನಷ್ಟು ಹೆಚ್ಚಾದಾಗ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ವಿನಯ್ ಖೋ ಖೋ ಕ್ರೀಡಾಪಟುವಾಗಿದ್ದು, ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಇವರಿಗೆ ಕ್ರೀಡೆಗೆ ನೀಡುವ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ವಿನಯ್ ಅಂತಿಮ ದರ್ಶನಕ್ಕೆ ತೀರ್ಥಹಳ್ಳಿಯ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.