ತುಮಕೂರು : ಸಿನಿಮೀಯ ರೀತಿಯಲ್ಲಿ ಮನೆ ಬಾಗಿಲು ಮುರಿದು ನಡುರಾತ್ರಿ 17 ವರ್ಷದ ಬಾಲಕಿಯನ್ನು ಅಪಹರಿಸಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪೋಷಕರು ಮಲಗಿದ್ದ ವೇಳೆ ಬಾಗಿಲು ಮುರಿದು ಒಳಗೆ ನುಗ್ಗಿದ ಆರೋಪಿ, ವಿದ್ಯಾರ್ಥಿನಿಯನ್ನು ಪೋಷಕರ ಎದುರಿನಲ್ಲಿಯೇ ಬೈಕ್ ನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.










