ತೆಲಂಗಾಣ: ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಮೃತರು ಕ್ರೂಸರ್ ವಾಹನದ ಮೂಲಕ ತಿರುಪತಿ ಪ್ರವಾಸ ಕೈಗೊಂಡಿದ್ದರು. ತಿಮ್ಮಪ್ಪನ ದರ್ಶನ ಪಡೆದ ಭಕ್ತಾದಿಗಳು ಮತ್ತೆ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಇಂದು ಬೆಳಗಿನ ಜಾವ 3:30ರ ಸುಮಾರಿಗೆ ಕಡಪ-ಚಿತ್ತೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕ್ರೂಸರ್ನಲ್ಲಿದ್ದ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
ಮೃತರನ್ನು ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32), ಹನುಮಂತ ಆಜೂರ (42) ಚಾಲಕ ಹನುಮಂತ ಜಾಧವ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ 11 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.










