ತ್ರಿಪುರಾ ಸಿಎಂ ಆಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ…

48
firstsuddi

ಅಗರ್ತಲ: ಸತತ ಎರಡನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಅಗರ್ತಲಾದ ಸ್ವಾಮಿ ವಿವೇಕಾನಂದ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಿದ್ದರು. ಮಾಣಿಕ್ ಸಹಾ ಜೊತೆಗೆ ಇನ್ನು ಎಂಟು ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಫೆಬ್ರವರಿ 16 ರಂದು ತ್ರಿಪುರಾದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು.