ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪ್ರಸಕ್ತ ರಾಜಕೀಯ ವಿಷಯಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ ಬಂದವರು. ಇದೀಗ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ, ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯನ್ನು ಟೀಕಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ, ನಿಮಗೆ ಹಿಂದಿ ಗೊತ್ತು. ನೀವು ಹಿಂದಿ ಮಾತನಾಡುತ್ತೀರಿ. ನೀವು ನಮ್ಮನ್ನೂ ಹಿಂದಿ ಮಾತನಾಡುವಂತೆ ಒತ್ತಾಯಿಸುತ್ತಿದ್ದೀರಿ. ಆದರೆ ಈ ಹಾಸ್ಯಾಸ್ಪದ ಆಟ ನಮ್ಮೊಂದಿಗೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದ ಚರ್ಚೆಗಳು ಮುಂದುವರಿದಿವೆ. ಈ ನೀತಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂದು ಹೇಳುವ ಮೂಲಕ ಎನ್‍ಇಪಿ 2020ನ್ನು ತಿರಸ್ಕರಿಸಿದ ತಮಿಳು ನಾಡು ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇತ್ತೀಚೆಗೆ ಸಮರ್ಥಿಸಿಕೊಂಡಿದ್ದರು.
ಇದೀಗ ನಮ್ಮ ರಾಜ್ಯ ತ್ರಿಭಾಷಾ ನೀತಿಯನ್ನು ಒಪ್ಪುವುದಿಲ್ಲ ಮತ್ತು ದ್ವಿಭಾಷಾ ನೀತಿಯನ್ನೇ ಅಳವಡಿಸಿಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡಾ ತಿಳಿಸಿದ್ದಾರೆ. ಎನ್‍ಇಪಿಯನ್ನು ತಮಿಳುನಾಡು ಸರ್ಕಾರ ತನ್ನ ನಿಲುವನ್ನು ರಾಜಕೀಯಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಧಮೇರ್ಂದ್ರ ಪ್ರಧಾನ್ ಈ ಹಿಂದೆ ಹೇಳಿದ್ದರು.










