ತ್ರಿವಳಿ ಕೊಲೆ ಪ್ರಕರಣ ; ಆರೋಪಿ ನಿರ್ದೋಷಿ ಎಂದು ತೀರ್ಪು…

12
firstsuddi

ಬೆಳಗಾವಿ : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕಗ್ಗೊಲೆ ಪ್ರಕರಣ ಸಂಬಂಧ ಆರೋಪಿಯನ್ನು ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ.

2015 ಆಗಸ್ಟ್ 16 ರಂದು ಬೆಳಗಾವಿಯ ಕುವೆಂಪು ನಗರದಲ್ಲಿ ನಸುಕಿನ ಜಾವ ತ್ರಿವಳಿ ಕೊಲೆ ನಡೆದಿತ್ತು. ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿ ಕೊಲೆಯಾಗಿತ್ತು. ಕೊಲೆಯಾದ 24 ಗಂಟೆಯಲ್ಲೇ ಎಪಿಎಂಸಿ ಪೊಲೀಸರು ಪ್ರವೀಣ್ ಭಟ್ ನನ್ನು ಬಂಧಿಸಿದ್ದರು. ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿತ್ತು.

ಬೆಳಗಾವಿ ಎಪಿಎಂಸಿ ಪೊಲೀಸರು ತನಿಖೆ ನಡೆಸಿ ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಾದ ಆಲಿಸಿದ ಬೆಳಗಾವಿ ಕೋರ್ಟ್ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಆ ಬಳಿಕ ತೀರ್ಪು ಪ್ರಶ್ನಿಸಿ ಆರೋಪಿ ಪರ ವಕೀಲರು ಹೈಕೊರ್ಟ್ ಮೆಟ್ಟಿಲೇರಿದ್ದರು. ಇದೀಗ ಸ್ಯಾಕ್ಷಾಧಾರಗಳ ಕೊರತೆಯಿಂದಾಗಿ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.