ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಬಂದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆ – ಹೆಚ್ಚಿದ ಆತಂಕ…

76
firstsuddi

ಮುಂಬೈ(ಮಹಾರಾಷ್ಟ್ರ) : ದಕ್ಷಿಣ ಆಫ್ರಿಕಾದಿಂದ ಮುಂಬೈನ ಡೊಂಬಿವಿಲ್ಲಿಗೆ ಹಿಂದಿರುಗಿದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

32 ವರ್ಷದ ವ್ಯಕ್ತಿ ನವೆಂಬರ್ 24 ರಂದು ದಕ್ಷಿಣ ಆಫ್ರಿಕಾದಿಂದ ದೆಹಲಿ ಮೂಲಕ ಮುಂಬೈಗೆ ಆಗಮಿಸಿದ್ದಾನೆ. ಸದ್ಯ ವ್ಯಕ್ತಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಮುನ್ಸಿಪಲ್ ಕಾರ್ಪೊರೇಷನ್ ನ ಪ್ರತ್ಯೇಕ ಕೊಠಡಿಯಲ್ಲಿ ಕ್ಯಾರಂಟೈನ್ ಗೊಳಿಸಿದ್ದಾರೆ.

ಕೆಡಿಎಂಸಿಯ ಆರೋಗ್ಯ ಅಧಿಕಾರಿ ಡಾ.ಪ್ರತಿಭಾ ಪಾನಪಾಟೀಲ್ ಮಾತನಾಡಿ, ರೋಗಿಯ ಸ್ಥಿತಿ ಸ್ಥಿರವಾಗಿದ್ದು, ಈತನಿಗೆ ಕೊರೊನಾ ಹೊಸ ತಳಿ ಓಮಿಕ್ರಾನ್ ಇದೆಯೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ವ್ಯಕ್ತಿಯ ಮಾದರಿಗಳನ್ನು ಜೀನೋಮ್ ಪರೀಕ್ಷೆಗೆ ಕಳುಹಿಸಲಾಗಿದೆ. ರೋಗಿಯ ಸಹೋದರನಿಗೆ ಕೊರೊನಾ ನೆಗೆಟಿವ್ ಬಂದಿದೆ. ಇನ್ನೊಂದೆಡೆ ಅವರ ಕುಟುಂಬದ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.