ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ- ಆರೆಂಜ್ ಅಲರ್ಟ್ ಘೋಷಣೆ…

60
firstsuddi

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ತಗ್ಗು ಪ್ರದೇಶಗಳು ತುಂಬುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.

ಇನ್ನೂ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ಜಿಲ್ಲೆಯ ಶಾಲೆಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದರೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲೆ ತಲುಪಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದ್ದು, ತಾಲೂಕುಗಳಲ್ಲಿ ತಹಶೀಲ್ದಾರ್ ಗಳು ಮತ್ತು ಬ್ಲಾಕ್ ಶಿಕ್ಷಣಾಧಿಕಾರಿಗಳಿಗೆ ಇಂದಿನ ಪರಿಸ್ಥಿತಿಯನ್ನು ಅವಲೋಕಿಸಿ ರಜೆ ಘೋಷಿಸುವಂತೆ ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.