ದಕ್ಷಿಣ ಕನ್ನಡ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್‍ಗೆ ನಿರ್ಬಂಧ…

74
firstsuddi

ಉಡುಪಿ : ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಿಗೆ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳು ಹಾಗೂ ಪ್ರಮೋದ್ ಮುತಾಲಿಕ್ ಹಿಂದಿನ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿರುವುದನ್ನು ಪರಿಗಣಿಸಿ ಜಿಲ್ಲೆ ಪ್ರವೇಶ ನಿಷೇಧಿಸಬೇಕು ಎಂದು ಜಿಲ್ಲೆಯ ಪೊಲೀಸ್ ಅಧೀಕ್ಷಕರು ಮನವಿ ಮಾಡಿಕೊಂಡಿದ್ದರು. ಮನವಿ ಪುರಸ್ಕರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.