ದಕ್ಷಿಣ ಕನ್ನಡ : ವಾಕಿಂಗ್‍ಗೆ ತೆರಳಿದ್ದ ವ್ಯಕ್ತಿಯನ್ನು ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು…

158
firstsuddi

ದಕ್ಷಿಣ ಕನ್ನಡ : ವಾಕಿಂಗ್ ಹೋಗಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿ ನಡೆದಿದೆ. ವಾಸು ಮೂಲ್ಯ(65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಟ್ಯಾಕ್ಸಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವೇಳೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಬಳಿಕ ಸ್ಥಳೀಯರು ವ್ಯಕ್ತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.