ದಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊರೋನಾ ಪಾಸಿಟಿವ್…

118
firstsuddi

ಮಂಗಳೂರು : ದಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸ್ವತಃ ಮಾಹಿತಿ ಹಂಚಿಕೊಂಡಿರುವ ಮಿಥುನ್ ರೈ ಅವರು ಸದ್ಯ ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿರುತ್ತೇನೆ ಎಂದು ಅವರು ತಿಳಿಸಿದ್ದಾರೆ. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳೊಂದಿಗೆ ಮತ್ತೆ ಅದಷ್ಟು ಬೇಗ ನಿಮ್ಮೆಲ್ಲರ ಸೇವೆಗೆ ಬರಲಿದ್ದೇನೆ. ಯಾರಾದರೂ ನನ್ನ ಸಂಪರ್ಕಕ್ಕೆ ಬಂದವರಿದ್ದಲ್ಲಿ ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ