ಮಂಗಳೂರು: ಕೊರೋನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸುರತ್ಕಲ್ ಹೊಸಬೆಟ್ಟುವಿನ 35 ವರ್ಷ ವ್ಯಕ್ತಿ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೆಲವು ದಿನಗಳ ಹಿಂದೆ ಉಸಿರಾಟ ಸಮಸ್ಯೆಯಿಂದ ಹೊಸಬೆಟ್ಟು ನಿವಾಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತರಾದವರ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ.










