ದರ್ಶನ್ ನಿಂದ ಹಲ್ಲೆ ಆರೋಪ ಪ್ರಕರಣ : ಸಂದೇಶ್ ಪ್ರಿನ್ಸ್ ಹೊಟೇಲ್ ನಲ್ಲಿ ಪೊಲೀಸರಿಂದ ಪರಿಶೀಲನೆ…

81
firstsuddi

ಮೈಸೂರು : ಸ್ಯಾಂಡಲ್ ವುಡ್ ನಟ ದರ್ಶನ್ ಅವರು ಸಂದೇಶ್ ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ಸಂದೇಶ್ ಪ್ರಿನ್ಸ್ ಹೋಟೆಲ್ ಗೆ ತೆರಳಿದ್ದಾರೆ.

ದೇವರಾಜ ಉಪ ವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ಪೊಲೀಸರು ಅಲ್ಲಿನ ಸ್ಥಳಗಳನ್ನು ಪರಿಶೀಲಿಸುತ್ತಿದ್ದಾರೆ. ಅಂದು ದರ್ಶನ್ ಮತ್ತು ಅವರ ಸ್ನೇಹಿತರು ಪಾರ್ಟಿ ನಡೆಸಿದ ಕೋಣೆ, ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜೊತೆಗೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಗಂಗಾಧರ್ ಅವರನ್ನು ಸಹ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸದ್ಯ ಈಗ ನಟ ದರ್ಶನ್ ಅವರು ತಮ್ಮ ಫಾರ್ಮ್ ಹೌಸ್ ನಲ್ಲಿ ಇದ್ದಾರೆ. ಇಂದು ಮಧ್ಯಾಹ್ನದ ನಂತರ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.