ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ – ಪಿಎಸ್ಐ ಅಮಾನತು…

253
firstsuddi

ಚಿಕ್ಕಮಗಳೂರು : ವಿಚಾರಣೆಗೆ ಕರೆತಂದ ದಲಿತ ಯುವಕನಿಗೆ ಠಾಣೆಯಲ್ಲೇ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ್ದ ಆರೋಪದಡಿ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್ ಹೊರಕೇರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಅರ್ಜುನ್ ಅವರ ಮೇಲೆ ಎಫ್ ಐಆರ್ ಕೂಡ ದಾಖಲಾಗಿತ್ತು. ಈ ಕುರಿತು ಜಿಲ್ಲಾ ಎಸ್ ಪಿ ಅಕ್ಷಯ್ ಅವರು ನೀಡಿದ ವರದಿ ಆಧಾರದ ಮೇಲೆ ಡಿಐಜಿ ಅವರು ಪಿಎಸ್ ಐ ಅರ್ಜುನ್ ಅವರನ್ನು ಅಮಾನತು ಗೊಳಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿದೆ. ಪುತ್ತೂರಿನ ಡಿವೈಎಸ್ಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸುವಂತೆ ಆದೇಶ ಮಾಡಲಾಗಿದೆ ಎಂದು ಜಿಲ್ಲೆಯ ಎಸ್ ಪಿ ಅಕ್ಷಯ್ ಅವರು ಮಾಹಿತಿ ನೀಡಿದ್ದು, ಪ್ರಕರಣದ ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ತನಿಖೆಯ ದೃಷ್ಟಿಯಿಂದ ಪ್ರಕರಣದ ಮುಂದಿನ ತನಿಖೆಯನ್ನು ಸಿಐಡಿ ಘಟಕಕ್ಕೆ ಹಸ್ತಾಂತರಿಸಲಾಗಿದೆ.