ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾಕಿಸ್ತಾನ ಕ್ರಿಕೆಟಿಗ.

39
firstsuddi

ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಶಾಹೀನ್ ಅಫ್ರಿದಿ ಅವರು ಪಾಕ್ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಪುತ್ರಿ ಅನ್ಶಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಿನ್ನೆ ಪಾಕಿಸ್ತಾನದ ಕರಾಚಿಯಲ್ಲಿ ವಿವಾಹ ನೆರವೇರಿದ್ದು, ಪಾಕಿಸ್ತಾನ ತಂಡದ ಹಾಲಿ ನಾಯಕ ಬಾಬರ್ ಅಜಮ್ ಸೇರಿದಂತೆ ಕ್ರಿಕೆಟ್ ಲೋಕದ ದಿಗ್ಗಜರು ಭಾಗಿಯಾಗಿದ್ದರು.

ಶಾಹೀನ್ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗುತ್ತಿದೆ. ಅವರ ಅಭಿಮಾನಿಗಳು ಕಾಮೆಂಟ್ ಮೂಲಕ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ.

ಪಾಕಿಸ್ತಾನದ ಸೂಪರ್ ಲೀಗ್, (PSL) ಫ್ಯಾಂಚೈಸಿ, ಲಾಹೋರ್ ಕಾಲಂಡರ್ಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶಾಹೀನ್ ಅಫ್ರಿದಿ ಅವರ ವಿವಾಹದ ಫೋಟೋಗಳನ್ನು ಹಂಚಿಕೊಂಡು ವಿಶ್ ಮಾಡಿದೆ.