ದಿಯಾ ಖ್ಯಾತಿಯ ಪೃಥ್ವಿ ಅಂಬರ್ ತಾಯಿ ನಿಧನ…

72
firstsuddi

ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಸುಜಾತ ಅಂಬರ್ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನೇತಾರರಾದ ವೀರಪ್ಪ ಅಂಬಾರ್ ಅವರ ಧರ್ಮಪತ್ನಿಯಾಗಿದ್ದರು. ಸುಜಾತ ಅಂಬಾರ್ ಅವರ ಅಂತ್ಯಕ್ರಿಯೆ ಇಂದು ಮಂಗಳೂರಿನ ಅವರ ಸ್ವಗೃಹದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಸುಜಾತ ಅಂಬರ್ ಅವರು ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದು, ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕಾಗಿ ದುಡಿಯುತ್ತಿದ್ದರು. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.

ಸುಜಾತ ಅವರ ಪುತ್ರ ಪೃಥ್ವಿ ಅಂಬರ್ ಮೊದಲಿಗೆ ಕನ್ನಡದ ಧಾರಾವಾಹಿಗಳ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು 2008ರಲ್ಲಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ಕಲ್ಯಾಣ‘ ಸೀರಿಯಲ್ ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ಇದಾದ ಬಳಿಕ ‘ಜೊತೆ ಜೊತೆಯಲಿ‘ ಸೀರಿಯಲ್ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಮನೆಮಾತಾಗಿದ್ದರು. 2020ರಲ್ಲಿ ತೆರೆಕಂಡ ಕನ್ನಡದ ಸೂಪರ್ ಹಿಟ್ ಸಿನಿಮಾ ‘ದಿಯಾ‘ ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರು. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ನಟಿಸಿದ್ದಾರೆ.