ದುಬೈನಿಂದ ಬಂದ ಮಹಿಳೆ ಸೂಟ್ ಕೇಸ್ ನಲ್ಲಿ 56 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ..!

86
firstsuddi

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಮಾದಕ ಜಾಲವನ್ನು ಪತ್ತೆ ಹಚ್ಚುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 35 ವರ್ಷದ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ ಆಕೆಯ ಸೂಟ್ ಕೇಸ್ ನ ತಳಭಾಗದಲ್ಲಿ 8 ಕೆ.ಜಿ ತೂಕದ 56 ಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ. ಮಹಿಳೆಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.