ದೆಹಲಿಗೆ ತೆರಳಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು.

23
firstsuddi

ನವದೆಹಲಿ : ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ಭುವನೇಶ್ವರದಿಂದ ದೆಹಲಿಗೆ ತೆರಳಿದ್ದಾರೆ.

ಮುರ್ಮು ಅವರು ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9.40 ಕ್ಕೆ ವಿಮಾನದಲ್ಲಿ ದೆಹಲಿಗೆ ತೆರಳಿದರು. ಭುವನೇಶ್ವರ್‌ನ ವಿಮಾನ ನಿಲ್ದಾಣದಲ್ಲಿ ಜನರಿಗೆ ಶುಭಾಶಯಗಳನ್ನು ತಿಳಿಸಲು ವಿಶೇಷ ವ್ಯವಸ್ಥೆ  ಮಾಡಲಾಗಿತ್ತು. 

ನಾಳೆ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಗಾಗಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.