ದೆಹಲಿ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ : ಅರವಿಂದ ಬೆಲ್ಲದ.

100
firstsuddi

ಬೆಂಗಳೂರು : ದೆಹಲಿ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ, ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಮಾಧ್ಯಮಗಳಲ್ಲಿ ಸುದ್ದಿ ಹರಡಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ನಿನ್ನೆ ತಡರಾತ್ರಿ ಬೆಲ್ಲದ ಅವರು ದಿಢೀರ್ ದೆಹಲಿಗೆ ತೆರಳಿರುವುದು ಭಾರೀ ಕುತೂಹಲ ಮೂಡಿಸಿತ್ತು.