ದೆಹಲಿ ರೀತಿ ಬೆಂಗಳೂರು ಆಗೋದು ಬೇಡ: ‘ಇವಿ’ ಬಳಕೆಗೆ ಸಾರಿಗೆ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ.

33

ಬೆಂಗಳೂರು: ದೆಹಲಿ ಮಾದರಿಯಲ್ಲಿ ಬೆಂಗಳೂರು ವಾಯುಮಾಲಿನ್ಯ ಹದಗೆಡುವುದು ಬೇಡ ಎಂದು ಮುಂಜಾಗ್ರತೆಯ ಸಲುವಾಗಿ ಸಾರಿಗೆ ಸಚಿವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆ ನಿಯಮ ಜಾರಿಗೆ ಕ್ರಮವಹಿಸಿ. ದಿನೇ ದಿನೇ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ನಿಯಂತ್ರಣದ ಕ್ರಮಗಳ ಕುರಿತು ಚಿಂತನೆ ನಡೆಸುವಂತೆ ಸಚಿವ ರಾಮಲಿಂಗಾ ರೆಡ್ಡಿಗೆ ಪತ್ರದಲ್ಲಿ ತಿಳಿಸಲಾಗಿದೆ. ಭವಿಷ್ಯದಲ್ಲಿ ಸಂಚರಿಸುವ ವಾಹನಗಳಿಗೆ ಅನುಮತಿ ನೀಡುವ ಮುನ್ನ, ಎಲೆಕ್ಟ್ರಿಕ್ ವಾಹನಗಳಾಗಿದ್ದರೆ ಮಾತ್ರ ಅನುಮತಿ ನೀಡಬೇಕು. ಸಾರಿಗೆ ಇಲಾಖೆಯಿಂದ ವಾಹನಗಳ ಖರೀದಿ ಮಾಡುವುದಿದ್ದರೆ ಎಲೆಕ್ಟ್ರಿಕ್ ವಾಹನಗಳನ್ನೇ ಖರೀದಿ ಮಾಡುವಂತೆ ಸಾರಿಗೆ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.