ದೇವಸ್ಥಾನದಿಂದ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್…

88
firstsuddi

ಯಾದಗಿರಿ : ದೇವಸ್ಥಾನದಿಂದ ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಗಸ್ಟ್ 8ರಂದು ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಮಹಿಳೆ ಮತ್ತು ಆಕೆಯ ಸಂಬಂಧಿ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರು, ಈ ಇಬ್ಬರನ್ನು ಆಟೋದಲ್ಲಿ ಫಾಲೋ ಮಾಡಿ ಯಾದಗಿರಿ ಶಹಾಪುರ ಮಾರ್ಗ ಮಧ್ಯದಲ್ಲಿ ಬೈಕ್ ಗೆ ಅಡ್ಡ ಹಾಕಿದ್ದಾರೆ. ನಂತರ ಮಹಿಳೆಯ ಸಂಬಂಧಿಗೆ ಥಳಿಸಿ ಮಹಿಳೆಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆ ಮತ್ತು ಆಕೆಯ ಸಂಬಂಧಿ ಈ ಬಗ್ಗೆ ದೂರು ದಾಖಲಿಸಿದ್ದು, ಸದ್ಯ ಇಬ್ಬರು ಕಾಮುಕರನ್ನು ಶಹಾಪೂರ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಈ ಕೃತ್ಯಕ್ಕೆ ಬಳಸಿದ ಆಟೋವನ್ನು ವಶಕ್ಕೆ ಪಡೆದಿದ್ದಾರೆ.