ರಾಮನಗರ: ಮಾಜಿ ಪ್ರಧಾನಿ ದೇವೇಗೌಡರಿಂದ ಬಿ. ಫಾರಂ ಸ್ವೀಕರಿಸಿ ಆಶೀರ್ವಾದ ಪಡೆದುಕೊಳ್ಳುವ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಕಣ್ಣೀರಿಟ್ಟಿದ್ದಾರೆ.
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾಗಲು ಜೆಡಿಎಸ್ ಪಕ್ಷದಿಂದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮಾಜಿ ಪ್ರಧಾನಿ ದೇವೇಗೌಡರಿಂದ ಬಿ ಫಾರಂ ಪಡೆದು ಆಶೀರ್ವಾದ ಪಡೆದುಕೊಳ್ಳಲು ಬಂದಿದ್ದರು. ಈ ವೇಳೆ ಹೆಚ್.ಡಿ ದೇವೇಗೌಡರು ಬಿ ಫಾರಂ ನೀಡುತ್ತಿದ್ದಂತೆ ನಿಖಿಲ್ ಭಾವುಕರಾಗಿ ಕಣ್ಣೀರು ಹಾಕಿದರು.
ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಭಾಗಿಯಾಗಿದ್ದರು.










