ಹೆಚ್.ಡಿ.ದೇವೇಗೌಡರ ಬಗ್ಗೆ ಕೆ.ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ.

103
firstsuddi

ತುಮಕೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುರಿತಾಗಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ವಿವಾದಿತ ಹೇಳಿಕೆ ನೀಡಿದ್ದು, ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕವಣದಾಲ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುವ ವೇಳೆ  ದೇವೇಗೌಡರು ಇಬ್ಬರ ಭುಜದ ಮೇಲೆ ಕೈ ಹಾಕಿ ನಡೆದಾಡುವ ರೀತಿ ತೋರಿಸುವ ಮೂಲಕ ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದು ನನ್ನ ಕೊನೆಯ ಚುನಾವಣೆಯಾಗಿದೆ. ಶೋಕಿ ಮತ್ತು ಮುಖಸ್ಥುತಿಗೆ ರಾಜಕಾರಣ ಮಾಡೋದು ಬೇಡ. ನಾನು ಎಂಎಲ್ ಎ ಆದರೆ ನೀವೆಲ್ಲಾ ಶಾಸಕರು ಇದ್ದಂತೆ. ನೀವು ಹೋರಾಟ ಮಾಡಿ ನಾನು ಎಂಎಲ್ ಎ ಆದರೆ ಸುಮ್ಮನೆ ನಾಮಕಾವಸ್ಥೆಗೆ ಇರ್ತೀನಿ. ಏನಾದ್ರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳುವ ಶಕ್ತಿ ನಿಮಗೆ ಬರುತ್ತೆ. ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಮತ ಕೇಳುತ್ತೇನೆ. ಇದು ನನ್ನ ಕೊನೆ ಎಲೆಕ್ಷನ್. ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲ. ನನಗೆ ಆಗಲೇ 72 ವರ್ಷ,77 ಆದ್ರೆ ಕೈಕಾಲು ಅಲ್ಲಾಡುತ್ತಿರುತ್ತದೆ. ಸರ್ಕಾರ ಬಂದ್ರೇ ನೂರಕ್ಕೆ ನೂರರಷ್ಟು ಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.