ದೇಶದಲ್ಲಿ ಒಂದೇ ದಿನ 13,823 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,05,95,660ಕ್ಕೆ ಏರಿಕೆ…

134
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,823 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,05,95,660ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದನ ಕೊರೊನಾ ಸೋಂಕಿನಿಂದ 162 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,52,718ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,05,95,660ಮಂದಿ ಸೋಂಕಿತರ ಪೈಕಿ ಈವರೆಗೆ 1,02,45,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನೂ 1,97,201 ಮಂದಿ ಸೋಂಕಿತರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.