ದೇಶದಲ್ಲಿ ಒಂದೇ ದಿನ 53,370 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 78,14,682ಕ್ಕೆ ಏರಿಕೆ…

107
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 53,370 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 78,14,682 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 650 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,17,956ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 78,14,682 ಮಂದಿ ಸೋಂಕಿತರ ಪೈಕಿ 70,16,046 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 6,80,680 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.