ದೇಶದಲ್ಲಿ ಒಂದೇ ದಿನ 53,601 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 22,68,676ಕ್ಕೆ ಏರಿಕೆ…

125
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಮಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 53,601 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,68,676ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 870 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 45,257ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 22,68,676 ಮಂದಿ ಸೋಂಕಿತರ ಪೈಕಿ 15,83,490ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 6,39,929 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.