ದೇಶದಲ್ಲಿ ಒಂದೇ ದಿನ 75,809 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆ…

125
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲೆಯ 75,809 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,133 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 72,775ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 42,80,423ಮಂದಿ ಸೋಂಕಿತರ ಪೈಕಿ 33,23,951 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 8,83,697 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.