ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ 39ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೊರೊನಾ ಸೋಂಕಿತರ ಸಂಖ್ಯೆ 9152ಕ್ಕೆ ಏರಿಕೆಯಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ 7987 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 856ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ ತಿಳಿದು ಬಂದಿದೆ.










