ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ 17ಮಂದಿ ಬಲಿ-ಸೋಂಕಿತರ ಸಂಖ್ಯೆ 5734ಕ್ಕೆ ಏರಿಕೆ…

163
firstsuddi

ನವದೆಹಲಿ : ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 166ಕ್ಕೆ ಏರಿಕೆಯಾಗಿದೆ. ಅಲ್ಲದೇ ಸೋಂಕಿತರ ಸಂಖ್ಯೆ 5734ಕ್ಕೆ ಏರಿಕೆಯಾಗಿದ್ದು, ಈವರೆಗೆ 473 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಏಪ್ರಿಲ್ 14ರ ಬಳಿಕವೂ ಲಾಕ್‍ಡೌನ್ ಮುಂದುವರೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದ್ದು, ಹಂತ ಹಂತವಾಗಿ ಲಾಕ್‍ಡೌನ್ ತೆರವುಗೊಳಿಸುವ ಆಲೋಚನೆ ಮಾಡಲಾಗಿದೆ ಎನ್ನಲಾಗಿದೆ. ಅಲ್ಲದೇ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿ ಏಪ್ರಿಲ್ 11ರಂದು ಸಂಪೂರ್ಣ ಮಾಹಿತಿಯನ್ನು ನೀಡಲಿದ್ದಾರೆ.