ದೇಶದಲ್ಲಿ ಕೊರೊನಾ ಸ್ಪೋಟ-ಒಂದೇ ದಿನ 17,296 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,90,401 ಕ್ಕೆ ಏರಿಕೆ…

196
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 17,296 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,90,401ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 407 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 15,301ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,90,401 ಮಂದಿ ಸೋಂಕಿತರ ಪೈಕಿ 2,85,637 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 1,89,463 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.