ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,126 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,77,113ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 332 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,61,389ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,43,77,113 ಮಂದಿ ಸೋಂಕಿತರ ಪೈಕಿ ಈವರೆಗೆ 3,37,75,086 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










