ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,197 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,66,598ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 301 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,64,153ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,44,66,598 ಮಂದಿ ಸೋಂಕಿತರ ಪೈಕಿ ಈವರೆಗೆ 3,38,73,890 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










