ದೇಶದಲ್ಲಿ 1,082 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,59,447ಕ್ಕೆ ಏರಿಕೆ…

58
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,082 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,59,447ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,30,486ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,59,447 ಮಂದಿ ಸೋಂಕಿತರ ಪೈಕಿ ಈವರೆಗೆ 4,41,13,761 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.