ದೇಶದಲ್ಲಿ 11,067 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,08,58,371ಕ್ಕೆ ಏರಿಕೆ…

101
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,067 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,08,58,371ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 94 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,55,252ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,08,58,371 ಮಂದಿ ಸೋಂಕಿತರ ಪೈಕಿ ಈವರೆಗೆ 1,05,61,608 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.