ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,666 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,07,01,193 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 123 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,53,847ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,07,01,193 ಮಂದಿ ಸೋಂಕಿತರ ಪೈಕಿ ಈವರೆಗೆ 1,03,73,606 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










