ದೇಶದಲ್ಲಿ 12,608 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,98,864ಕ್ಕೆ ಏರಿಕೆ

78
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,608 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,98,864ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 72 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,27,206ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,42,98,864 ಮಂದಿ ಸೋಂಕಿತರ ಪೈಕಿ ಈವರೆಗೆ 4,36,70,315 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.