ದೇಶದಲ್ಲಿ 12,847 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,70,577ಕ್ಕೆ ಏರಿಕೆ…

66
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,847 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,70,577ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 14 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,817ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,32,70,577 ಮಂದಿ ಸೋಂಕಿತರ ಪೈಕಿ ಈವರೆಗೆ 4,26,82,697 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.