ದೇಶದಲ್ಲಿ 13,083 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,07,33,131 ಕ್ಕೆ ಏರಿಕೆ…

113
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,083 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,07,33,131 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 137 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,54,147ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,07,33,131 ಮಂದಿ ಸೋಂಕಿತರ ಪೈಕಿ ಈವರೆಗೆ 1,04,09,160 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.