ದೇಶದಲ್ಲಿ 16,299 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,42,06,996ಕ್ಕೆ ಏರಿಕೆ…

62
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,299 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,42,06,996ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 53 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,26,879ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,42,06,996 ಮಂದಿ ಸೋಂಕಿತರ ಪೈಕಿ ಈವರೆಗೆ 4,35,55,041 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.