ದೇಶದಲ್ಲಿ 16,311 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,04,66,595ಕ್ಕೆ ಏರಿಕೆ…

110
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,311 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,04,66,595ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 161 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,51,160ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,04,66,595ಕ್ಕೆ ಮಂದಿ ಸೋಂಕಿತರ ಪೈಕಿ ಈವರೆಗೆ 1,00,92,909ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,22,526ಕ್ಕೆ ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.