ದೇಶದಲ್ಲಿ 16,838 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,11,73,761ಕ್ಕೆ ಏರಿಕೆ…

106
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,838 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,11,73,761ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 113 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,57,548ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,11,73,761 ಮಂದಿ ಸೋಂಕಿತರ ಪೈಕಿ ಈವರೆಗೆ 1,08,39,894 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.