ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,815 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,35,85,554ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,25,343ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,35,85,554 ಮಂದಿ ಸೋಂಕಿತರ ಪೈಕಿ ಈವರೆಗೆ 4,29,37,876 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










