ದೇಶದಲ್ಲಿ 1,957 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,16,394ಕ್ಕೆ ಏರಿಕೆ…

62
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,957 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,16,394ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,822ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,16,394 ಮಂದಿ ಸೋಂಕಿತರ ಪೈಕಿ ಈವರೆಗೆ 4,40,60,198 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.